ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ-ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ
ಪುತ್ತೂರು: ರಾಜ್ಯಾದ್ಯಂತ ನಡೆದ ಹಿಂದೂ ವಿರೋಧಿ ಕೃತ್ಯವನ್ನು ವಿರೋಧಿಸಿ ಪುತ್ತೂರಿನಲ್ಲಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ದರ್ಬೆ ವೃತ್ತದ ಬಳಿ ಜಮಾವಣೆಗೊಂಡ ಸಮಿತಿ ಕಾರ್ಯಕರ್ತರು ದರ್ಬೆ ವೃತ್ತದ ಬಳಿ ಕುಳಿತು ಪ್ರತಿಭಟನೆ ನಡೆಸಿದರು. ಪ್ರತಭಟನಾಕಾರರನ್ನು ಅಲ್ಲಿಂದ ತೆರವುಗೊಳಿಸಲು ಪೊಲೀಸರು ಮುಂದಾದಾಗ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ