ಪಾಟ್ರಕೋಡಿ ಗಾಂಜಾ ಪ್ರಕರಣ:ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಪುತ್ತೂರು: ವರ್ಷದ ಹಿಂದೆ ಪಾಟ್ರಕೋಡಿಯಲ್ಲಿ ಪತ್ತೆಯಾದ ಭಾರಿ ಪ್ರಮಾಣದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಪಾಟ್ರಕೋಡಿಯಲ್ಲಿ ಭಾರಿ ಪ್ರಮಾಣದ ಗಾಂಜಾ ಪ್ರಕರಣದಲ್ಲಿ ಪತ್ತೆ ಮಾಡಿದ ಪೆÇಲೀಸರು ಅರೋಪಿಗಳನ್ನು ಬಂಧಿಸಿದ್ದರು. ಈ ಪೈಕಿ 2ನೇ ಆರೋಪಿ ಕಾಸರಗೋಡು ಮಂಜೇಶ್ವರ ಹೊಸಂಗಡಿ ನಿವಾಸಿ ಮಹಮ್ಮದ್ ಶಫೀಕ್ ಅವರು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ನ್ಯಾಯಾಲಯ ಆರೋಪಿ ಮೇಲೆ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ ಪುತ್ತೂರು ಪೆÇಲೀಸರು ದ.ಕಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ, ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್ ಅವರ ನಿರ್ದೇಶನದಂತೆ ಪುತ್ತೂರು ನಗರ ಪೆÇಲೀಸ್ ಠಾಣೆ ಇನ್‍ಸ್ಪೆಕ್ಟರ್ ಸುನಿಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಎಸ್.ಐ ಶ್ರೀಕಾಂತ್ ರಾಥೋಡ್ ಅವರ ನೇತೃತ್ವದಲ್ಲಿ ಎ.ಎಸ್.ಐ ಚಂದ್ರ ಮತ್ತು ಹೆಡ್‍ಕಾನ್‍ಸ್ಟೇಬಲ್ ಪರಮೇಶ್ವರ್ ಅವರು ಆರೋಪಿ ಮಹಮ್ಮದ್ ಶಫೀಕ್ ಅವರನ್ನು ಮಂಜೇಶ್ವರದಲ್ಲಿ ಬಂಧಿಸಿ ಮಂಗಳೂರು 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.