ಪುತ್ತೂರು: ಸರ್ಕಾರಿ ಆಸ್ಪತ್ರೆಯಲ್ಲಿ ಶಾರ್ಟ್‌ಸಕ್ಯೂಟ್ ಅವಘಡ
ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಐಸಿಯುವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22ರ ತಡ ರಾತ್ರಿ ನಡೆದಿದ್ದು ಅದೃಷ್ಟವಶಾತ್ ಹೆಚ್ಚಿನ ಅನಾಹುತವೊಂದು ತಪ್ಪಿದೆ. ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಭದ್ರತಾ ಸಿಬ್ಬಂದಿಗಳು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರಿಂದ ರೋಗಿಗಳು ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದ್ದಾರೆ. ಬೆಂಕಿಯ ಶಮನದ ಬಳಿಕ ದತ್ತ ಮಾಲಾಧಾರಿಗಳು ಅಸ್ಪತ್ರೆಯನ್ನು ಶುಚಿಗೊಳಿಸಲು ಸಹಕರಿಸಿದ್ದಾರೆ. ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಆಶಾ ಪುತ್ತೂರಾಯ ಈ ಸಂದರ್ಭ ಉಪಸ್ಥಿತರಿದ್ದರು.