ಪುತ್ತೂರು: ಜ.6ರಂದು ಜಿಲ್ಲಾ ಮಟ್ಟದ ವಾಲಿಬಾಲ್ ಚಾಂಪಿಯನ್‌ಶಿಪ್
ಪುತ್ತೂರು: ದ.ಕ. ಜಿಲ್ಲಾ ವಾಲಿಬಾಲ್ ಸಂಸ್ಥೆ ಮತ್ತು ಪುತ್ತೂರು ತಾಲೂಕು ವಾಲಿಬಾಲ್ ಸಂಸ್ಥೆ ಹಾಗೂ ಸುದಾನ ವಸತಿಯುತ ಶಾಲೆ ಆಶ್ರಯದಲ್ಲಿ 14,17,19 ವಯೋಮಾನದ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಬಾಲಕ ಬಾಲಕಿಯರ ವಾಲಿ ಬಾಲ್ ಚಾಂಪಿಯನ್ ಶಿಪ್ 2023 ಜ.6ರಂದು ಬೆಳಗ್ಗೆ 9ಗಂಟೆಗೆ ಸುದಾನ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ದ. ಕ. ಜಿಲ್ಲಾ ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಬಿ.ಎಸ್. ಸತೀಶ್ ಕುಮಾರ್ ಹೇಳಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಸವಣೂರು ವಿದ್ಯಾಸಂಸ್ಥೆಯ ಸಂಚಾಲಕ ಸೀತಾರಾಮ ರೈ ಸವಣೂರು, ಪಂದ್ಯಾಟದ ಉದ್ಘಾಟನೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನಡೆಸಲಿದ್ದಾರೆ. ವಿಧಾನ ಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್ ಫರೀದ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ವಕೀಲ ಜಯಪ್ರಕಾಶ್ ರೈ ಬಹುಮಾನ ವಿತರಣೆಮಾಡಲಿದ್ದು, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಟಿ. ಜಿ. ರಾಜಾರಾಮ್ ಭಟ್ ಮತ್ತಿತರರು ಉಪಸ್ಥಿತರಿರಲಿದ್ದಾರೆ ತಿಳಿಸಿದರು.