ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಮಮ ಪರಿವಾರ ಸಭೆ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಮಮ’ ಪರಿವಾರದ ಸಭೆಯು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರ ಅಧ್ಯಕ್ಷತೆಯಲ್ಲಿ ದೇವಳದ ಸಭಾಭವನದಲ್ಲಿ ನಡೆಯಿತು.ಮುಳಿಯ ಕೇಶವಪ್ರಸಾದ್ ಅವರು ಮಾತನಾಡಿ ದೇವಳದಿಂದ 5 ಅಂಶಗಳ ಕಾರ್ಯಕ್ರಮಗಳ ಯೋಜನೆ ಹಾಕಿಕೊಳ್ಳಲಾಗಿದೆ.

ಇದನ್ನೂ ಓದಿ:

ಮುರ ರೈಲ್ವೇ ಹಳಿ ಚರಂಡಿಯಲ್ಲಿ ಮೃತ ದೇಹ ಪತ್ತೆ

https://v4news.com/mura-railway-station-death/

ಜನವರಿ ತಿಂಗಳಲ್ಲಿ ಭಾರತೀಯ ಪರಂಪರಾಗದ ಕಾರ್ಯಕ್ರಮಗಳನ್ನು ನಡೆಸಲು ಮಮ ಪರಿವಾರದ ವಾರ್ಡ್ ಸಮಿತಿಗಳಿಂದ ಪ್ರತಿಭೆಗಳಿಗೆ ಅವಕಾಶ ಮತ್ತು ಅವರಿಂದ ದೇವರಿಗೆ ಸೇವಾ ರೂಪದಲ್ಲಿ ಕಾರ್ಯಕ್ರಮ ಸಮರ್ಪಣೆಗೆ ಅವಕಾಶ ನೀಡಲಾಗುವುದು. ಹಾಗಾಗಿ ಡಿ.27ರ ಒಳಗಾಗಿ ಭಾಗವಹಿಸುವವರು ಹೆಸರು ನೋಂದಾಯಿಸುವಂತೆ ವಿನಂತಿಸಿದರು. ನಗರಸಭೆ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಸಹಿತ ಹಲವಾರು ಮಂದಿ ಸಲಹೆ ಸೂಚನೆ ನೀಡಿದರು.

ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ರವೀಂದ್ರನಾಥ ರೈ ಬಳ್ಳಮಜಲು, ಶೇಖರ್ ನಾರಾವಿ, ರಾಮಚಂದ್ರ ಕಾಮತ್, ರಾಮದಾಸ್ ಗೌಡ, ಡಾ. ಸುಧಾ ಎಸ್ ರಾವ್, ವೀಣಾ ಬಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.