ಫೆ.11ರಂದು ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ : ಕಾರ್ಯಕ್ರಮ ಯಶಸ್ವಿಗಾಗಿ ಪ್ರಾರ್ಥನೆ
ಪುತ್ತೂರು : ಅಮಿತ್ ಶಾ ಫೆ.11 ರಂದು ಪುತ್ತೂರಿಗೆ ಆಗಮಿಸಿ ಕ್ಯಾಂಪ್ಕೊ ಸುವರ್ಣ ಮಹೋತ್ಸವ ಉದ್ಘಾಟನೆ ಹಾಗೂ ಸಮಾವೇಶ ನಡೆಯಲಿರುವ ಹಿನ್ನಲೆಯಲ್ಲಿ ಕಾರ್ಯಕ್ರಮದ ಯಶಸ್ವಿಗಾಗಿ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಗುರುವಾರ ಪ್ರಾರ್ಥನೆ ಸಲ್ಲಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದ ಸಂದರ್ಭದಲ್ಲಿ ಹಾಗೂ ಬರುವವರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಅನುಗ್ರಹಿಸಲು ದೇವರನ್ನು ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ,, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ಮುಖಂಡರಾದ ಅಪ್ಪಯ್ಯ ಮಣಿಯಾಣಿ, ಸಾಜ ರಾಧಾಕೃಷ್ಣ ಆಳ್ವ, ಪಿ. ಜಿ. ಜಗನನಿವಾಸ್ ರಾವ್ರಾ, ಧಾಕೃಷ್ಣ ಬೋರ್ಕರ್, ರಾಜೇಶ್ ಬನ್ನೂರು, ಚಂದ್ರಶೇಖರ ರಾವ್ ಬಪ್ಪಳಿಗೆ, ಗೋಪಾಲಕೃಷ್ಣ ಹೇರಳೆ, ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ನಿತೇಶ್ ಕುಮಾರ್ ಶಾಂತಿವನ, ಮತ್ತಿತರರು ಉಪಸ್ಥಿತರಿದ್ದರು.