HomeFresh Newsಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಮಾಡಿಯೇ ಸಿದ್ಧ : ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಮಾಡಿಯೇ ಸಿದ್ಧ : ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರಿಗೆ ಮೆಡಿಕಲ್ ಕಾಲೇಜು ಬರಬೇಕು ಎಂಬ ಆಗ್ರಹ ನನಗೆ ಶಾಸಕನಾಗುವ ಮೊದಲೇ ಇತ್ತು. ಅಭಿವೃದ್ದಿಯಾಗುತ್ತಿರುವ ಪುತ್ತೂರಿಗೆ ಈ ಯೋಜನೆಯನ್ನು ಜಾರಿಗೆ ತರಲು ಈಗಾಗಲೇ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು ಕ್ಯಾಬಿನೆಟ್‍ನಲ್ಲಿ ಅನುಮೋದನೆ ಮಾಡಿಸಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿಸಿಯೇ ಸಿದ್ದ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ashok kumar rai

ಅವರು ಮೆಡಿಕಲ್ ಕಾಲೇಜಿಗೆ ನಿಗಧಿಪಡಿಸಲಾದ ಜಾಗವನ್ನು ವೀಕ್ಷಣೆ ಮಾಡಿದರು. ಸುಮಾರು 40 ಎಕ್ರೆ ಸರಕಾರಿ ಜಾಗವನ್ನು ಕಾಲೇಜು ನಿರ್ಮಾಣಕ್ಕೆ ಕಾಯ್ದಿರಿಸಲಾಗಿದೆ. ದ.ಕ ಜಿಲ್ಲಾಧಿಕಾರಿಯಾಗಿದ್ದ ಎ ಬಿ ಇಬ್ರಾಹಿಂರವರ ಕಾಲಾವಧಿಯಲ್ಲಿ ಜಾಗವನ್ನು ಗುರುತಿಸಿ ಸರಕಾರದ ಸ್ವಾಧೀನಕ್ಕೊಳಪಡಿಸಲಾಗಿತ್ತು. ಅದೇ ಸ್ಥಳದಲ್ಲಿ ಮುಂದೆ ಮೆಡಿಕಲ್ ಕಾಲೇಜು ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಶಾಸಕರು ಹೇಳಿದರು.

ashok kumar rai

ಪುತ್ತೂರು ಕ್ಷೇತ್ರ ಅಭಿವೃದ್ದಿಯಾಗಬೇಕಾದರೆ ಬೃಹತ್ ಯೋಜನೆಗಳು ಕ್ಷೇತ್ರಕ್ಕೆ ಬರಬೇಕು. ಹೆಚ್ಚು ಹೆಚ್ಚು ಅನುದಾನಗಳೂ ಬರಬೇಕಿದೆ. ಉದ್ಯಮಗಳು ಆರಂಭವಾದೊಡನೆ ಸಾವಿರಾರು ಜನರಿಗೆ ಉದ್ಯೋಗವೂ ದೊರೆಯಲಿದೆ ಎಂದು ಶಾಸಕರು ಹೇಳಿದರು.

ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ವಿಟ್ಲ ಉಪ್ಪಿನಂಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ, ಮಾಜಿ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಇಂಟಕ್ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments