ಪುತ್ತೂರು: ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕ ಪೊಲೀಸ್ ವಶಕ್ಕೆ

ಪುತ್ತೂರು: ಇಂದು ಮುಂಜಾನೆಯಿಂದಲೇ ರಾಜ್ಯದ ಹಲವೆಡೆ ಪೊಲೀಸರು ದಾಳಿ ನಡೆಸುತ್ತಿದ್ದು, ಪುತ್ತೂರು ಮೂಲದ ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ಇಂದು ಮುಂಜಾನೆಯಿಂದಲೇ ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪಿಎಫ್ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದು, ಪಿಎಫ್ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜಾಬೀರ್ ರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಪ್ರತಿಬಂಧಕ ಕಾಯ್ದೆಯಡಿ ಗರಿಷ್ಠ ಅವಧಿಯ ಮುಚ್ಚಳಿಕೆಗಾಗಿ ಕಾರ್ಯನಿರ್ವಾಹಕ ನ್ಯಾಯಾಧೀಶರೂ ಆಗಿರುವ ತಹಶೀಲ್ದಾರ್ ರವರ ಮುಂದೆ ಹಾಜರುಪಡಿಸಿದ್ದಾರೆ ಎಂದು ವರದಿಯಾಗಿದೆ.