ಪುತ್ತೂರು : ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ನಿಖಿಲ್ ಬಿ. ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಇದರ ಆಶ್ರಯದಲ್ಲಿ ಅ17 ಮತ್ತು 18ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸು ಪ ಪೂ ಕಾಲೇಜಿನಲ್ಲಿ ನಡೆದ ‘ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾ ಕೂಟ 2024-25’ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ನಿಖಿಲ್ ಬಿ. ಕೆ ಇವರು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ನರಿಮೊಗರು ನಿವಾಸಿ ಬಾಲಚಂದ್ರ ಕೆ ಹಾಗೂ ಪ್ರಮೀಳ ಜಿ ದಂಪತಿಗಳ ಪುತ್ರನಾಗಿದ್ದು, ನವೀನ್ ಕುಮಾರ್ ಮಾಡಾವು ತರಬೇತಿಯನ್ನು ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ
ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.