ಪುತ್ತೂರು: ರೈಲ್ವೆ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ

ಪುತ್ತೂರು: ಪುತ್ತೂರು ನಗರದ ನೆಹರುನಗರದಿಂದ ವಿವೇಕಾನಂದ ಕಾಲೇಜು ಸಂಪರ್ಕಿಸುವ ರಸ್ತೆಯಲ್ಲಿ ರೈಲ್ವೇ ಇಲಾಖೆಯ ಅನುದಾನ ರೂ.5.34 ಕೋಟಿ ವೆಚ್ಚದಲ್ಲಿ ರೈಲ್ವೇ ಮೇಲ್ಸೇತುವೆಯ ಅಗಲೀಕರಣ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದರು.

ರೈಲ್ವೇ ಮೇಲ್ಸೇತುವೆಯ ಬಳಿ ತೆಂಗಿನ ಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ನಮ್ಮ ಉದ್ದೇಶ ಇರುವುದು ಈ ರಸ್ತೆ ಮುಂದೆ ಚತುಷ್ಪಥ ರಸ್ತೆಯಾಗಬೇಕು. ಈ ನಿಟ್ಟಿನಲ್ಲಿ ವಿವೇಕಾನಂದ ನರೇಂದ್ರದ ಮುಂದಿರುವ ಚತುಷ್ಪಥ ರಸ್ತೆಯಂತೆ ನೆಹರುನಗರ ದಿಂದ ವಿವೇಕಾನಂದ ಕಾಲೇಜು ಆಗಿ ಉಪ್ಪಿನಂಗಡಿ ಸಂಪರ್ಕಿಸುವ ಪಡೀಲು ತನಕ ಚತುಷ್ಪಥ ರಸ್ತೆಗೆ ಪ್ರಸ್ತಾನವೆ ನೀಡಲಾಗಿದೆ. ಅದು ಲೋಕೋಪಯೋಗಿ ಇಲಾಖೆ ಮತ್ತು ಕೇಂದ್ರಕ್ಕೆ ಕೊಟ್ಟಿದ್ದೇವೆ. ಹಾಗಾಗಿ ರೈಲ್ವೇ ಮೇಲ್ಸೇತುವೆ ಅಗಲೀಕರಣ ಆದ ತಕ್ಷಣ 2ನೇ ಆದ್ಯತೆ ರಸ್ತೆ ಅಗಲೀಕರಣ ಕಾಮಗಾರಿ ಕೈಗೆತ್ತಿಕೊಳ್ಳುತ್ತೆವೆ ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೃಷ್ಣ ಭಟ್, ಟಿ.ಎಸ್ ಭಟ್, ಬಲರಾಮ ಆಚಾರ್ಯ, ಸತೀಶ್ ಭಟ್, ಕೇಂದ್ರ ಸರಕಾರದ ದಿಶಾ ನಾಮನಿರ್ದಶಿತ ಸದಸ್ಯ ರಾಮದಾಸ್ ಹಾರಾಡಿ, ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.