ಪುತ್ತೂರಿನ ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.12ರಂದು ಬೆಳಗ್ಗೆ ನಿಧನರಾದರು.

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿರುವ ಲೋಕಪ್ಪ ಗೌಡ ಅವರ ಪತ್ನಿ ನಳಿನಿ ಲೋಕಪ್ಪ ಗೌಡ ಅವರು ಸಮಾಜ ಸೇವಕಿಯಾಗಿದ್ದರು. 2008ರಲ್ಲಿ ಮುಂಡೂರು ಮೃತ್ಯುಂಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಅವರ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವ ನಡೆದಿತ್ತು. 2005ರಲ್ಲಿ ಜಿ.ಪಂ ಸದಸ್ಯರಾಗಿದ್ದರು. 2010ರಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಹೀಗೆ ಹಲವಾರು ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಅವರು ಸಮಾಜ ಸೇವೆಯಲ್ಲಿ ನಿರತರಾಗಿದ್ದರು.

ಮೃತರು ಪತಿ ಲೋಕಪ್ಪ ಗೌಡ ಮತ್ತು ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Related Posts

Leave a Reply

Your email address will not be published.