ಪುತ್ತೂರು: ಹಿಂದೂ ವಿರೋಧಿ ಹೇಳಿಕೆಗೆ ವಿಹಿಂಪ ಖಂಡನೆ
ಪುತ್ತೂರು: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣವಾಗಿ, ಶ್ರೀರಾಮನ ಪ್ರತಿಷ್ಠಾಪನೆ ನಡೆಯಲಿರುವ ಸಂದರ್ಭದಲ್ಲಿ ಹಿಂದುಗಳು ಒಗ್ಗಟ್ಟಾಗಿ ಭಕ್ತಿಭಾವದಿಂದ ನಡೆದುಕೊಳ್ಳುವ ಕಾರ್ಯವಾಗುತ್ತಿದೆ. ಇದನ್ನು ನೋಡಿ ಹತಾಶೆಯ ಭಾವನೆಯಿಂದ ರಾಜ್ಯ ಸರ್ಕಾರದ ಪ್ರಮುಖರು ಹಿಂದು ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದು, ಇದನ್ನು ವಿಶ್ವ ಹಿಂದು ಪರಿಷತ್ ಹಾಗೂ ಇತರ ಸಂಘ ಪರಿವಾರದ ಎಲ್ಲಾ ಸಂಘಟನೆಗಳು ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆಯ ಅಧ್ಯಕ್ಷ ಕೃಷ್ಣ ಪ್ರಸನ್ನ ಹೇಳಿದರು.ಅಯೋಧ್ಯೆಗೆ ತೆರಳವು ಜನರನ್ನು ಹೆದರಿಸುವಂತಹ ಹೇಳಿಕೆಯನ್ನು ನೀಡುವ ಮೊದಲು ಆಧಾರಗಳನ್ನು ಬಹಿರಂಗ ಪಡಿಸುವ ಕಾರ್ಯವಾಗಬೇಕು ಎಂದು ಸುದ್ದಿಗೋಷ್ಠಿ ನಡೆಸಿ ಆಗ್ರಹಿಸಿದರು.