ಪುತ್ತೂರು: ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗದಿನಾಚರಣೆ

ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ವಿಶ್ವ ಯೋಗದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ನಂತರ ಮಾತನಾಡಿದ ಅವರು ” ಭಾರತೀಯ ವೈದ್ಯ ಪದ್ಧತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ.ಯೋಗದಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಸಾಧ್ಯವಿದ್ದು, ಯೋಗ ಇದ್ದರೆ ರೋಗವಿಲ್ಲ, ಯೋಗ ದಿನ ನಿತ್ಯದ ಭಾಗವಾಗಲಿ ” ಎಂದರು.

ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್,ಕೋಸ್ಟಲ್ ಹೋಮ್ ಮಾಲಕರಾದ ಸಂದೇಶ್ ರೈ, ಪ್ರಾಥಮಿಕ ಅರೋಗ್ಯ ಕೇಂದ್ರ ಅರೋಗ್ಯ ಸಹಾಯಕಿ ಶ್ರೀಮತಿ ವೀಣಾ, ಆಶಾ ಕಾರ್ಯಕರ್ತೆ ಶ್ರೀಮತಿ ಚಂದ್ರಾವತಿ ಉಪಸ್ಥಿತರಿದ್ದರು.ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿ ಸೂರ್ಯ ನಮಸ್ಕಾರ, ಪ್ರಾಣಯಾಮ ಹಾಗೂ ಯೋಗಾಸನಗಳನ್ನು ನಡೆಸಿಕೊಟ್ಟರು.

govt women polytechnic

Related Posts

Leave a Reply

Your email address will not be published.