ಅಪಘಾತಕ್ಕೀಡಾಗಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದ ಪಿ.ಎಸ್.ಐ. ಸೇಸಮ್ಮ

ಪುತ್ತೂರು : ಆಟೋ ರಿಕ್ಷಾವೊಂದು ಡಿವೈಡರ್ ಗೆ ಡಿಕ್ಜಿಯಾಗಿ ಪಲ್ಟಿಯಾದ ಘಟನೆ ಪುತ್ತೂರು ಉಪ್ಪಿನಂಗಡಿಯ ಪಡೀಲ್ ನಲ್ಲಿ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡ ಮಹಿಳೆ ಮತ್ತು ಚಾಲಕನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಿ.ಎಸ್.ಐ ಸೇಸಮ್ಮ ಮತ್ತು ಎ.ಎಸ್.ಐ ರಾಧಾಕೃಷ್ಣ ಅವರು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಚಾಲಕ ಅಬ್ದುಲ್ ಎಂಬವರ ಆಟೋ ಡಿವೈಡರ್‍ಗೆ ಬಡಿದ ಹಿನ್ನಲೆಯಲ್ಲಿ ಮಹಿಳೆ ಕುಸುಮಾವತಿಯವರಿಗೆ ಗಾಯವಾಗಿತ್ತು. ಈ ವೇಳೆ ಜನರು ಕೂಡ ಅಪಘಾತ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಇದೇ ರಸ್ತೆಯಲ್ಲಿ ಕರ್ತವ್ಯಕ್ಕೆಂದು ತೆರಳುತ್ತಿದ್ದ ಮಹಿಳಾ ಠಾಣಾ ಪಿಎಸ್ ಐ ಸೇಸಮ್ಮ ಮತ್ತು ಎ ಎಸ್ ಐ ರಾಧಾಕೃಷ್ಣ ಮಹಿಳೆಯನ್ನು ಮತ್ತು ಚಾಲಕನನ್ನು ಸರ್ಕಾರಿ ಆಸ್ಪತ್ರೆಗೆ ತಮ್ಮ ಸರ್ಕಾರಿ ವಾಹನದಲ್ಲಿ ಕರೆದುಕೊಂಡು ಹೋದರು.ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ಆದಷ್ಟು ಬೇಗ ಸಿಗುವಂತೆ ಮಾಡಿದ ಮಹಿಳಾ ಅಧಿಕಾರಿ ಮಾನವೀಯತೆ ಮೆರೆದರು.
