ಪುತ್ತೂರು : ಅಕ್ಷಯ ಕಲ್ಲೇಗನನ್ನು 58ಬಾರಿ ತಿವಿದ ದುಷ್ಕರ್ಮಿಗಳು, ಗಾಯ ಕಂಡ ವೈದ್ಯರೇ ಶಾಕ್..!
ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ ಅಕ್ಷಯ್ ಕಲ್ಲೇಗ ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು ಬಯಲಾಗಿದೆ.
ಪ್ರಕರಣ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಚೇತನ್, ಮನೀಶ್, ಮಂಜ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿ ಅಕ್ಷಯ್ ಮೇಲೆ ಮಚ್ಚು ಬೀಸಿರೋ ಶಂಕೆ ವ್ಯಕ್ತವಾಗುತ್ತಿದೆ. 58 ಬಾರಿ ತಲವಾರಿನಿಂದ ಹಲ್ಲೆ ಮಾಡಿರುವುದು ಮರಣೋತ್ತರ ಪರೀಕ್ಷೆ ವೇಳೆ ಬೆಳಕಿಗೆ ಬಂದಿದೆ. ಅಕ್ಷಯ್ ದೇಹದ ಮೇಲಿನ ಗಾಯ ಕಂಡು ವೈದ್ಯರೇ ಶಾಕ್ ಆಗಿದ್ದಾರೆ. ಹಂತಕರು ಮನಸೋ ಇಚ್ಛೆ ಅಕ್ಷಯ್ ಮೇಲೆ ತಲವಾರು ಬೀಸಿದ್ದಾರೆ.ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಪುತ್ತೂರಿನ ನೆಹರು ನಗರದ ಅಕ್ಷಯ್ ಮನೆಗೆ ಮೃತದೇಹ ಆಗಮಿಸುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು.
ಈ ಮಧ್ಯೆ ಆರೋಪಿಗಳೊಂದಿಗೆ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್ ನೇತೃತ್ವದಲ್ಲಿ ಮೂವರು ಆರೋಪಿಗಳನ್ನು ಕೃತ್ಯ ನಡೆದ ಸ್ಥಳಕ್ಕೆ ಕರಕೊಂಡು ಹೋಗಿ ಮಹಜರು ನಡೆಸಿದರು.
ನೆಹರೂ ನಗರಕ್ಕೆ ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಕರಕೊಂಡು ಬಂದಾಗ ಆರೋಪಿಗಳನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಜನ ಸೇರಿದ್ದರು. ಮಹಜರು ಸ್ಥಳದಲ್ಲೇ ಅಕ್ಷಯ್ ಕಲ್ಲೇಗ ಗುಂಪು ಆರೋಪಿಗಳಿಗೆ ಎಚ್ಚರಿಕೆ ನೀಡಿದ್ದು ನಿಮ್ಮನ್ನು ಬಿಡುವುದಿಲ್ಲ ಎಂದು ಆಕೋಶ ವ್ಯಕ್ತಪಡಿಸಿ ಪರಿಸ್ಥಿತಿ ವಿಕೋಪಕ್ಕೆ ತೆರಳುವುದನ್ನು ಗಮನಿಸಿದ ಪೆÇೀಲಿಸರು ಕೂಡಲೇ ಜನರನ್ನು ಚದುರಿಸಿ ಮಹಜರಿಗೆ ಅನುವು ಮಾಡಿಕೊಟ್ಟರು.