ಪುತ್ತೂರಿನ ಪ್ರತಿಷ್ಟಿತ ಹೆಸರುವಾಸಿಯಾದ ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ, ರಾಧಾಕೃಷ್ಣ ಭಕ್ತ ನಿಧನ

ಪುತ್ತೂರು:ಪುತ್ತೂರು ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಅಧ್ಯಕ್ಷರಾಗಿ ಮತ್ತು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಉದ್ಯಮಿ, ಸಂಘಟನಾ ಚತುರ ರಾಧಕೃಷ್ಣ ಭಕ್ತ (72ವರ್ಷ)ಇಂದು(ಮೆ.4)ರಂದು ನಿಧನರಾಗಿದ್ದಾರೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಅಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ರಾಧಕೃಷ್ಣ ಭಕ್ತರು ಧಾರ್ಮಿಕ ಮುಂದಾಳುವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ಇವರು ಪುತ್ತೂರಿನಲ್ಲಿ ವಿವೇಕಾನಂದ ಇಂಜಿನಿಯರಿಂಗ್‌ ಕಾಲೇಜ್‌ ಸ್ಥಾಪನೆಯ ಮುಖ್ಯ ರೂವಾರಿಯಾಗಿದ್ದರು. ಹಲವು ವರ್ಷಗಳ ಕಾಲ ಪುತ್ತೂರಿನ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ ಇವರು ಅಖಿಲ ಭಾರತ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯ ದೇವಾಲಯಗಳ ಒಕ್ಕೂಟದ ಉಪಾಧ್ಯಕ್ಷರಾಗಿದ್ದರು.

ಮೃತರು ಪತ್ನಿ ಮತ್ತು ಪುತ್ರಿ ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ

Related Posts

Leave a Reply

Your email address will not be published.