ರಾಜಸ್ಥಾನ ಘಟನೆ ಮತ್ತು ಗಲಭೆಯ ಹಿಂದೆ ವಿದೇಶಿ ಕೈವಾಡವಿದೆ : ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ
ರಾಜಸ್ಥಾನದ ಉದಯಪುರದಲ್ಲಿ ಹಿಂದು ಯುವಕನ ಶಿರಚ್ಛೇದ ಘಟನೆ ಮಾನವೀಯತೆಗೆ ಸವಾಲಾದ ಪ್ರಕರಣ. ಕೃತ್ಯದ ಹಿಂದೆ ವ್ಯವಸ್ಥಿತ ಸಂಚಿದೆ, ಭಯೋತ್ಪಾದಕ ಕೃತ್ಯ. ದೇಶದಲ್ಲಿ ಐಸಿಸ್, ತಾಲಿಬಾನ್ ಮಾನಸಿಕತೆ ತಲೆ ಎತ್ತುತ್ತಿರುವುದಕ್ಕೆ ಇದು ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದ್ದಾರೆ.
ಇದೇ ಮಾದರಿಯ ಹತ್ಯೆ ಶಿವಮೊಗ್ಗದಲ್ಲೂ ನಡೆದಿತ್ತು. ಹಿಂದು ಕಾರ್ಯಕರ್ತ ಹರ್ಷನ ಕತ್ತು ಕೊಯ್ದು ಅದರ ವಿಡಿಯೋವನ್ನು ಆತನ ಸೋದರಿಗೆ ಕಳಿಸಲಾಗಿತ್ತು. ಅದನ್ನು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸಿದ್ದು ಕಠಿಣ ಕ್ರಮ ಕೈಗೊಂಡಿದೆ. ನೂಪುರ್ ಶರ್ಮಾ ಹೇಳಿಕೆ ನಂತರ ದೇಶದಲ್ಲಿ ನಡೆದಂತಹ ಘಟನೆಗಳು, ಗಲಭೆಗಳ ಹಿಂದೆ ವಿದೇಶಿ ಶಕ್ತಿಗಳ ಕೈವಾಡ ಸ್ಪಷ್ಟವಾಗಿದೆ. ರಾಜಸ್ಥಾನದಲ್ಲಿರುವ ಸರ್ಕಾರದ ತುಷ್ಟೀಕರಣ ನೀತಿ ಈ ಕೃತ್ಯಕ್ಕೆ, ಘಟನೆ ನಡೆಯಲು ಕಾರಣ. ಘಟನೆಯ ಕುರಿತು ಕಾಂಗ್ರೆಸ್ ಯಾಕೆ ಮೌನ ವಹಿಸಿದೆ. ಚಿಕ್ಕ- ಚಿಕ್ಕ ವಿಷಯಕ್ಕೆ ರಸ್ತೆಗೆ ಬರುವ ಚಿಂತಕರು ಈಗ ಎಲ್ಲಿದ್ದಾರೆ. ಇವರ ತುಷ್ಟೀಕರಣ ರಾಜನೀತಿ, ಇಂತಹ ಮಾನಸಿಕಕತೆ ಬೆಳೆಯಲು ಕಾರಣ. ದೇಶದಲ್ಲಿ ಜನರ ನಡುವೆ ಭಯ ಹುಟ್ಟಿಸುವ ತಂತ್ರ ಇದಾಗಿದೆ. ಮಾನವೀಯ ಗುಣಗಳಿಗೆ ಸವಾಲಾಗಿ ಪರಿಣಮಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.