ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ಮನವಿ ಸಲ್ಲಿಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ, ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ರವರು ಮಾಹಿತಿಯನ್ನು ನೀಡಿದರು. ಜಿಲ್ಲೆಯ ಜನತೆ ಶಾಂತಿ ಸೌಹಾರ್ದತೆಯನ್ನು ಬಯಸುತ್ತಿದ್ದಾರೆ. ಆದರೆ ಕೆಲವು ವಿಘ್ನ ಸಂತೋಷಗಳು ಜಿಲ್ಲೆಯ ಶಾಂತಿಯನ್ನು ಕಾದಡುತ್ತಿದ್ದಾರೆ. ಮುಂದೆ ಇದಕೆಲ್ಲ ಕಡಿವಾಣ ಹಾಕಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಜರಿದ್ದರು.

Related Posts

Leave a Reply

Your email address will not be published.