ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಭೇಟಿ
ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಅವರು ಶನಿವಾರ ಮಧ್ಯಾಹ್ನ ಭೇಟಿ ನೀಡಿದರು.
ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಬಿಗ್ ಬಾಸ್- 12 ರ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಅವರನ್ನು ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶೇಖರ ಸಾಲ್ಯಾನ್ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು.


















