ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿರುವುದು ಖಂಡನೀಯ

ನಮ್ಮ ಆಡಳಿತದ ಅವಧಿಯಲ್ಲಿ ಹತ್ಯೆ ನಡೆದಿದೆ ನಿಜ.ಆದರೆ ಅಪರಾಧಿಗಳು ಬಿಜೆಪಿ ಕಡೆಯವರಾಗಿದ್ದರು. ಕಾಂಗ್ರೆಸ್ ಸಾಮರಸ್ಯವನ್ನು ಬಯಸುವ ಪಕ್ಷವಾಗಿದೆ. ಹಿಂಸೆಯನ್ನು ಪ್ರಚೋದಿಸುವ ಪಕ್ಷ ಅಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮತೀಯವಾದಿಗಳು ಪರಾಕಾಷ್ಠೆಯಿಂದ ಮೆರೆಯುತ್ತಿದ್ದಾರೆ. ಮಡಿಕೇರಿಯಲ್ಲಿ ನೆರೆಪೀಡಿತ ಪ್ರದೇಶವನ್ನು ವೀಕ್ಷಿಸಿದಲು ಹೋಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದಾರೆ. ಈ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ ಎಂದು ಹೇಳಿದರು.

ಇನ್ನು ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಕೇಸ್‍ನಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುತ್ತೇವೆ ಎಂದು ಎಡಿಜಿಪಿ ಹೇಳಿಕೆಗೆ ಮಾಜಿ ಸಚಿವ ರಮಾನಾಥ ರೈ ಪ್ರತಿಕ್ರಿಯೆ ನೀಡಿದ್ದಾರೆ. ಮೊದಲು ಹತ್ಯೆಯ ಹಿಂದಿನ ಸೂತ್ರಧಾರಿಯನ್ನು ಶಿಕ್ಷಿಸಿ. ಆಗ ಜಿಲ್ಲೆಯಲ್ಲಿ ಗಲಾಟೆ ಸಂಪೂರ್ಣ ನಿಲ್ಲುತ್ತದೆ ಎಂದು ಎಡಿಜಿಪಿ ಅವರಿಗೆ ರಮಾನಾಥ ರೈ ಅವರು ಸಲಹೆ ನೀಡಿದರು. ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.