ಜೂನ್ 7ರಂದು ರೋಹನ್ ಕಾರ್ಪೊರೇಷನ್ ಅರ್ಪಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮ

ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಜೂನ್ 7ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.

ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಮೇ 24ರಂದು ಆಯೋಜಿಸಲೆಂದು ತೀರ್ಮಾನಿಸಲಾಗಿತ್ತು. ಅನಿವಾರ್ಯ ಕಾರಣಗಳಿಂದ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಇದೀಗ ಜೂನ್ 7ರಂದು ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದಾರೆ. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಲಿದೆ.