ಕಡಬ: ಕೋಡಿಂಬಾಳದಲ್ಲಿ ರೈಲ್ವೇ ಹಳಿ ಸಮೀಪ ಆತ್ಮಹತ್ಯೆಗೆ ಶರಣಾದ ನಿವೃತ್ತ ರೈಲ್ವೇ ಉದ್ಯೋಗಿ

ಕೋಡಿಂಬಾಳ ದಲ್ಲಿ ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋಡಿಂಬಾಳ ಗ್ರಾಮದ ಗುಂಡಿಮಜಲು‌ ನಿವಾಸಿ ಮಾಧವ ರೈ ( 62 ವ) ಆತ್ಮಹತ್ಯೆ ಮಾಡಿಕೊಂಡವರು.

ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಯಲ್ಲಿ ಪತ್ತೆಯಾಗಿದೆ .ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ಮರಣೊತ್ತರ ಪರೀಕ್ಷೆಗೆ ತರಲಾಗಿದೆ.

ಮೃತರು ಕೋಡಿಂಬಾಳದ ಅಯಪ್ಪ ಭಜನಾ ಮಂದಿರದ ಸೇವಾ ಕಾರ್ಯದಲ್ಲಿಯೂ ಸಕ್ರಿಯವಾಗಿ ತೊಡಗಿಕೊಂಡಿದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಕಡಬ ಪೊಲೀಸರು ಘಟನಾ‌ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ 6 ಮಂದಿ ಮಕ್ಕಳನ್ನು ಅಗಲಿದ್ದಾರೆ.

Related Posts

Leave a Reply

Your email address will not be published.