ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಕಾರು ಅಪಘಾತ
ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ವರದಿಯಾಗಿದೆ.ಸದ್ಯ ಇವರನ್ನು ಚಿಕಿತ್ಸೆಗಾಗಿ ದೆಹಲಿಯ ಸೆಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪ್ನಾ ಕಿಶೋರ್ ಸಿಂಗ್ ಅವರು ಸ್ಥಳಕ್ಕೆ ಧಾವಿಸಿದ್ದಾರೆ. ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅಪಘಾತ ನಡೆದಿದ್ದು, ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.