ಎ.17ಕ್ಕೆ ಎಸ್ ಡಿಪಿಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ
ನಾಮ ಪತ್ರ ಸಲ್ಲಿಕೆ: ಅಥಾವುಲ್ಲಾ ಜೋಕಟ್ಟೆ
ಉಳ್ಳಾಲ: ಎಪ್ರಿಲ್ 17 ಸೋಮವಾರದಂದು ಮಂಗಳೂರು ವಿಧಾನಸಭಾ ಕ್ಷೇತ್ರ ಎಸ್ ಡಿಪಿಐ ಚುನಾವಣಾ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಯವರು ಸಹಸ್ರಾರು ಕಾರ್ಯಕರ್ತರೊಂದಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಎಸ್ ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಹಾಗೂ ರಾಜ್ಯ ಸಮಿತಿ ಸದಸ್ಯರೂ ಆದ ಅಥಾವುಲ್ಲಾ ಜೋಕಟ್ಟೆ ತಿಳಿಸಿದ್ದಾರೆ.ಸೋಮವಾರ ಬೆಳಿಗ್ಗೆ 11:00 ಗಂಟೆಗೆ ಸರಿಯಾಗಿ ಉಳ್ಳಾಲ ಮಾಸ್ತಿಕಟ್ಟೆ ಜಂಕ್ಷನ್ ನಿಂದ ಕಾಲ್ನಡಿಗೆ ಜಾಥಾದಲ್ಲಿ ಸಹಸ್ರಾರು ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಲಿದ್ದಾರೆ. ಬಳಿಕ ರಿಯಾಝ್ ಫರಂಗಿಪೇಟೆ ಯವರು ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.