ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಕಾರ್ಯಕರ್ತ ಶ್ರೀ ಗೋಪಾಲ್ ಚೆಟ್ಟಿಯಾರ್ ವಿಧಿವಶ

ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ.

ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ ಜೀವನದಿಂದಲ್ಲೇ ಸಂಘದ ಸ್ವಯಂಸೇವಕರು, ಕಾರ್ಯಕರ್ತರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿಯ ನಂತರ ಪೂರ್ಣಪ್ರಮಾಣದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ಅವರ ಅಂತಿಮ ವಿಧಿವಿಧಾ‌ನಗಳು ಉಪ್ಪಳ ಸಮೀಪದ ಬಂದ್ಯೋಡು ಮನೆಯಲ್ಲಿ ಬೆಳಗ್ಗೆ 11:00ಕ್ಕೆ ನಡೆಯಲಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

Related Posts

Leave a Reply

Your email address will not be published.