ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯರಿಗೆ ನುಡಿನಮನ

ಬಂಟ್ವಾಳ: ಡಾ. ಎಸ್.ಎಂ ಗೋಪಾಲಕೃಷ್ಣ ಆಚಾರ್ಯ ಅವರು ಎಲ್ಲಾ ಜಾತಿ, ಧರ್ಮ ಪಂಗಡದ ಜನರಿಗೆ ನೆರವಾಗುವ ಮೂಲಕ ಸಮಾಜದ ಆಸ್ತಿಯಾಗಿದ್ದರು ಎಂದು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ ಹೇಳಿದರು.

ಇತ್ತೀಚೆಗೆ ನಿಧನರಾದ ಮಾರ್ನಬೈಲು ಬಜಾರ್ ಸಮೂಹ ಸಂಸ್ಥೆಗಳ ಆಡಳಿತ ಪಾಲುದಾರ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಅವರ ಉತ್ತರಕ್ರಿಯೆಯ ಪೂರ್ವಭಾವಿಯಾಗಿ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ನುಡಿ ನಮನ ಸಲ್ಲಿಸಿದರು. ನಂದಾವರ ದೇವಸ್ಥಾನದ ಮೋಕ್ತೇಸರರಾಗಿ ದೇವಸ್ಥಾನದ ಅಭಿವೃದ್ಧಿಗೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಸಮಾಜದಲ್ಲಿ ಕಷ್ಟಕ್ಕೊಳಗಾದ ಎಲ್ಲಾ ವರ್ಗದ ಜನರಿಗೂ ತನ್ನಿಂದಾಗುವ ಸಹಾಯವನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದರು ಎಂದು ತಿಳಿಸಿದರು.


ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ, ಉದ್ಯಮಿ ಲೋಕೇಶ್ ಆಚಾರ್ಯ ಪುಂಜಾಲಕಟ್ಟೆ, ಲಯನ್ಸ್ ಕ್ಲಬ್ ನಿಕಟಪೂರ್ವ ಜಿಲ್ಲಾ ಗವರ್ನರ್ ವಸಂತ ಕುಮಾರ್ ಶೆಟ್ಟಿ, ಕೋಟ ಚಂದಯ್ಯ ಆಚಾರ್, ಸಂದೀಪ್ ಆಚಾರ್ಯ, ವಿಶ್ವಕರ್ಮ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಹರೀಶ್ ಆಚಾರ್ಯ ಮೊದಲಾದವರು ನುಡಿ ನಮನ ಸಲ್ಲಿಸಿದರು. ಈ ಸಂದರ್ಭ ೧೦ ಮಂದಿ ಅನಾರೋಗ್ಯ ಪೀಡಿತ ವ್ಯಕ್ತಿಗಳಿಗೆ ಆರ್ಥಿಕ ಸಹಾಯ ನೀಡಲಾಯಿತು. ಸಹೋದರ ಸುಧಾಕರ ಆಚಾರ್ಯ, ಮೃತರ ಪತ್ನಿ ರಾಗಿಣಿ, ಪ್ರಥಮ್, ಪುಷ್ಪಲತಾ ಜೆ. ಆಚಾರ್ಯ, ಯಶವಂತ ಆಚಾರ್ಯ ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ರುಕ್ಮಯ ಪೂಜಾರಿ, ನ್ಯಾಯವಾದಿ ಅಶ್ವನಿ ಕುಮಾರ್ ರೈ, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿದರು. ರಾರಸಂ ಫೌಂಡೇಶನ್ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು.

s m gopalakrishna

Related Posts

Leave a Reply

Your email address will not be published.