ಸಕಲೇಶಪುರ: ಭೀಕರ ಅಪಘಾತ-ಬೈಕ್ ಸವಾರರಿಗೆ ಗಂಭೀರ ಗಾಯ

ಸಕಲೇಶಪುರ ನಗರದ ಬಿಎಂ ರಸ್ತೆಯಲ್ಲಿ ಬೈಕ್ ಹಾಗೂ ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡು ಮೂಲದ ಲಾರಿಯ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾದ ಘಟನೆ ನಡೆದಿದೆ.
ನಂತರ ಲಾರಿಯನ್ನು ಬಾಳುಪೇಟೆಯ ಹತ್ತಿರ ತಡೆದು ನಿಲ್ಲಿಸಿಲಾಗಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದಂತ ಮಂಜುಗೆ ಗಂಭೀರ ಗಾಯವಾಗಿದ್ದು ಇನ್ನೊರ್ವ ಯುವರಾಜ್‌ಗೆ ಸಣ್ಣಪುಟ್ಟ ಗಾಯಗಳಾಗಿದೆ. ಇವರು ಜಮ್ಮನಹಳ್ಳಿ ಹಾಗೂ ಬಂದಿಹಳ್ಳಿಯವರು ಎಂದು ತಿಳಿದು ಬಂದಿದೆ. ಮಂಜುನಾಥ್ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ.