ಸಂಪಾಜೆ: ಕೊಯಿನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಇದೀಗ ಸಂಭವಿಸಿದ ಘಟನೆ ನಡೆದಿದೆ.

ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
