ಸತೀಶ್ ಜಾರಕಿಹೊಳಿ ಹೇಳಿಕೆ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ ಹಿಂದೂ ವಿರೋಧಿ ಹೇಳಿಕೆಯನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು.
ವಿಧಾನಪರಿಷತ್‍ನ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಅವರು ಮಾತನಾಡಿ, ಸತೀಶ್ ಜಾರಕಿಹೊಳಿ ಅವರು ಹಿಂದೂ ಶಬ್ಧದ ಬಗ್ಗೆ ಬುದ್ದಿಗೇಡಿ ಹೇಳಿಕೆ ನೀಡಿದ್ದಾರೆ.ಕಾಂಗ್ರೆಸ್ ಹಿಂದೂ ವಿರೋಧಿ ಮನೋಸ್ಥಿತಿ ಹೊಂದಿದೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಅವರು ಮಾತನಾಡಿ, ಹಿಂದೂಗಳ ಬಗ್ಗೆ ನೆಹರೂ ಅವರ ಮನೋಸ್ತಿತಿಯಿಂದ ಕಾಂಗ್ರೆಸ್ ನಾಯಕರು ಇನ್ನೂ ಹೊರಬಂದಿಲ್ಲ ಎಂದರು.ಈ ಸಂದರ್ಭದಲ್ಲಿ ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮೂಡಾ ಮಾಜಿ ಅಧ್ಯಕ್ಷರಾದ ರವಿಶಂಕರ ಮಿಜಾರು, ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.