ನ.28 ರಂದು ಎಸ್.ಡಿ.ಎಂ ಓರಿಯೆಂಟೇಶನ್ ಕಾರ್ಯಕ್ರಮ
ಉಜಿರೆ, ನ. 22: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ನೂತನ ಶೈಕ್ಷಣ ಕ ವರ್ಷದ ಕಾರ್ಯಚಟುವಟಿಕೆಗಳು ನವೆಂಬರ್ 28ರಂದು ಎಸ್‍ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿತವಾದ ಓರಿಯೆಂಟೇಶನ್ ಕಾರ್ಯಕ್ರಮದ ಮೂಲಕ ವಿದ್ಯುಕ್ತವಾಗಿ ಚಾಲನೆ ಕಾಣಲಿವೆ. ಈ ಕಾರ್ಯಕ್ರಮಕ್ಕೆ ಕೇಂದ್ರದ ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಸಾಕ್ಷಿಯಾಗಲಿದ್ದಾರೆ.ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಎಸ್.ಡಿ.ಎಂ.ನ ಶೈಕ್ಷಣ ಕ ಮತ್ತು ಆಡಳಿತಾತ್ಮಕ ಕಾರ್ಯನಿರ್ವಹಣೆಯ ಸಮಗ್ರ ಸ್ವರೂಪವನ್ನು ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಈ ಸಾಂಸ್ಥಿಕ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಈ ಸಲದ ಕಾರ್ಯಕ್ರಮವನ್ನು ಮೂಲತಃ ಅಳದಂಗಡಿಯವರಾಗಿರುವ, ಪ್ರಸ್ತುತ ಲಂಡನ್ ಸ್ಕೂಲ್ ಆಫ್ ಮೆಡಿಸಿನ್‍ನ ಪ್ರಾಧ್ಯಾಪಕ, ನವಜಾತಶಿಶು ತಜ್ಞ ಪ್ರೊ. ನರೇಂದ್ರ ಅವರು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಈ ಕಾರ್ಯಕ್ರಮ ಆರಂಭಗೊಳ್ಳಲಿದೆ.ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಉದಯಚಂದ್ರ ಪಿ.ಎನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.