‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

ಉಜಿರೆ, ಜೂ.16: ಯಾವುದೇ ಸ್ಪರ್ಧೆಯಲ್ಲಿ ಸೋಲು- ಗೆಲುವಿಗಿಂತಲೂ ಭಾಗವಹಿಸುವಿಕೆ ಮುಖ್ಯವಾಗುತ್ತದೆ ಎಂದು ಉಜಿರೆ ಎಸ್.ಡಿ.ಎಂ. ವಸತಿ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಡಾ. ಟಿ. ಕೃಷ್ಣಮೂರ್ತಿ ಹೇಳಿದರು.

ಇಲ್ಲಿನ ಶ್ರೀ ಧ.ಮಂ. ಕಾಲೇಜಿನಲ್ಲಿ ಜೂ.15ರಂದು ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗದ ವತಿಯಿಂದ ಆಯೋಜಿಸಲಾದ ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

“ಎಕೊ-ವಿಶನ್ ನಂತಹ ಸ್ಪರ್ಧೆಗಳು ನಮ್ಮ ಪ್ರತಿಭೆಯನ್ನು ಪ್ರದರ್ಶಿಸುವಲ್ಲಿ ಬಹು ಮುಖ್ಯ ಪಾತ್ರವಹಿಸುತ್ತವೆ. ಇವುಗಳಲ್ಲಿ ಪಾಲ್ಗೊಳ್ಳುವುದರಿಂದ ಭವಿಷ್ಯವನ್ನು ಗಟ್ಟಿಗೊಳಿಸಲು ಅನುಕೂಲವಾಗುತ್ತದೆ” ಎಂದು ಅವರು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿ, ಕಾಲೇಜಿನ ಕಲಾ ನಿಕಾಯದ ಡೀನ್ ಡಾ. ಶಲೀಪ್ ಕುಮಾರಿ ಅವರು ಸ್ಪರ್ಧೆಗಳ ಟ್ರೋಫಿಗಳನ್ನು ಅನಾವರಣಗೊಳಿಸಿದರು. “ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಬೆಳೆಯಲು ಸಾಧ್ಯ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಕುಲಸಚಿವ (ಆಡಳಿತ) ಪ್ರೊ. ಎಸ್.ಎನ್. ಕಾಕತ್ಕರ್, “ನಮ್ಮ ಆಲೋಚನೆಗಳು ಸಕಾರಾತ್ಮಕವಾಗಿರಬೇಕು. ಆಗ ಯಶಸ್ಸು ನಮ್ಮದಾಗುತ್ತದೆ. ಎಕೊ-ವಿಶನ್ ವಿದ್ಯಾರ್ಥಿಗಳಿಗೆ ಒಳ್ಳೆಯ ಅವಕಾಶ” ಎಂದರು.

ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಗಣರಾಜ ಕೆ., ಪ್ರಾಧ್ಯಾಪಕರಾದ ಡಾ. ನಾಗರಾಜ ಪೂಜಾರಿ ಹಾಗೂ ಅಭಿನಂದನ್ ಜೈನ್, ವಿದ್ಯಾರ್ಥಿ ಪ್ರತಿನಿಧಿಗಳಾದ ಅಭಿಲಾಷ್ ಹಾಗೂ ಹಿಮಾಂಶಿ, ಇತರ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್. ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಮನೋಜ್ ವಂದಿಸಿ, ಅನ್ನಪೂರ್ಣ ನಿರೂಪಿಸಿದರು.

Related Posts

Leave a Reply

Your email address will not be published.