ಮಂಗಳೂರಿಗೆ ಆಗಮಿಸಿದ SDPI ರಾಷ್ಟ್ರೀಯ ಅಧ್ಯಕ್ಷರಿಗೆ ಬಜಪೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ
ಮಂಗಳೂರು ಮೇ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ SDPI ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ ಎಂ ಕೆ ಫೈಝಿಯವರು ಇಂದು ಮಂಗಳೂರಿಗೆ ಆಗಮಿಸಿದರು .ಬಜಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಧ್ಯಕ್ಷರನ್ನು ಜಿಲ್ಲಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಬಜಪೆ ಪಟ್ಟಣದ ವರೆಗೆ ವಾಹನ ಜಾಥಾ ಮೂಲಕ ಕರೆ ತರಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ, ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ, ರಾಜ್ಯ ಚುನಾವಣಾ ಸಹ ಉಸ್ತುವಾರಿ ನವಾಝ್ ಉಳ್ಳಾಲ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಜಮಾಲ್ ಜೋಕಟ್ಟೆ ,ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್, ಮೂಡಬಿದ್ರೆ ಕ್ಷೇತ್ರಾಧ್ಯಕ್ಷರಾದ ಆಸಿಫ್ ಕೋಟೆಬಾಗಿಲು , ಕಾರ್ಯದರ್ಶಿ ನಿಸಾರ್ ಮರವೂರು ಹಾಗೂ ಇತರ ನಾಯಕರು ಉಪಸ್ಥಿತರಿದ್ದರು . ಉಳ್ವಾಲ,ಬಂಟ್ವಾಳ, ಮೂಡಬಿದ್ರೆ ಕ್ಷೇತ್ರಗಳಲ್ಲಿ ನಡೆಯುವ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಎಂ ಕೆ ಫೈಝಿಯವರು ಭಾಗವಹಿಸಲಿದ್ದಾರೆ.