ಎಸ್‍ಡಿಪಿಐ ನಿಷೇಧಿಸಲು ಗೃಹ ಸಚಿವರು ಮಾಡಿದ ಗೂಡಂಗಡಿಯಲ್ಲ : ಅನ್ವರ್ ಸಾದತ್ ಬಜತ್ತೂರು ಆಕ್ರೋಶ

ತೊಕ್ಕೊಟ್ಟು : ಕೇಂದ್ರ ಹಾಗೂ ರಾಜ್ಯ ಗೃಹ ಸಚಿವರು ಎಸ್ ಡಿಪಿಯನ್ನು ನಿಷೇಧಿಸಲಾಗುವುದು ಎಂದು ಹೇಳುತ್ತಿದ್ದು ನಿಷೇಧಿಸಲು ಇದೇನೂ ಗೂಡಂಗಡಿಯಲ್ಲ. ಇದು ಚುನಾವಣಾ ಆಯೋಗದಲ್ಲಿ ನೋಂದಾಯಿತವಾದ ಒಂದು ರಾಜಕೀಯ ಪಕ್ಷ ಎಂದು ಎಸ್ ಡಿಪಿ ಐ ದ. ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

sdpi

ಎಸ್ ಡಿಪಿ ಐ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯ ಮೇಲೆ ರಾಷ್ಟ್ರೀಯ ತನಿಖಾ ದಳ ನಡೆಸಿದ ಅತಿಕ್ರಮಣದ ದಾಳಿ ಮತ್ತು ಪಾಪ್ಯುಲರ್ ಫ್ರಂಟ್ ನಾಯಕರ ಅಕ್ರಮ ಬಂಧನವನ್ನು ಖಂಡಿಸಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( ಎಸ್ಡಿಪಿಐ ) ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

sdpi


ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಝಾಹಿದ್ ಮಲಾರ್ ಮಾತನಾಡಿ ಕೆಲವು ನಾಯಕರ ಬಂಧನ ಅಥವಾ ದಾಳಿಯಿಂದ ನಮ್ಮ ಶಕ್ತಿ ಕುಂದಿಸಲು ಸಾಧ್ಯವಿಲ್ಲ. ಈ ಕ್ರಾಂತಿಕಾರಿ ಚಳುವಳಿ ಒಂದು ಮನೋಸ್ಥಿತಿಯಾಗಿ ಮಾರ್ಪಟ್ಟಿದ್ದು ನೀವು ತುಳಿದಷ್ಟು ಮತ್ತೆ ಹೆಚ್ಚು ಹೆಚ್ಚು ಚಿಗುರುತ್ತದೆ ಎಂದರು.ಪ್ರತಿಭಟನಾ ಸಭೆಯ ನೇತೃತ್ವವನ್ನು ಕ್ಷೇತ್ರ ಸಮಿತಿಯ ಅಧ್ಯಕ್ಷ ಇರ್ಷಾದ್ ಅಜ್ಜಿನಡ್ಕ ವಹಿಸಿದ್ದರು.ಪ್ರತಿಭಟನಾ ಸಭೆಯಲ್ಲಿ ರಾಜ್ಯ ನಾಯಕ ಅಕ್ರಮ್ ಹಸನ್, ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್, ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕೆಸಿ ರೋಡ್, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ನ ಜಾಫರ್ ಫೈಝಿ, ಮತ್ತಿತರು ಪಾಲ್ಗೊಂಡರು.

Related Posts

Leave a Reply

Your email address will not be published.