ಎಸ್‍ಡಿಪಿಐ ಕಾರ್ಯಕರ್ತರಿಂದ ಕಾಂಗ್ರೆಸ್ ವಿರುದ್ಧ ಅಪಪ್ರಚಾರ..!!!

ಎಸ್ಟಿಪಿಐ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನಿಂದ ಮುಸ್ಲಿಮರಿಗೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಬೆಳ್ತಂಗಡಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಲೀಂ ಹೇಳಿದರು.
ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರು ಪ್ರಜಾದ್ವನಿ ಎಂಬ ಬಸ್ ಯಾತ್ರೆ ಮೂಲಕ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಪಕ್ಷ ಹಮ್ಮಿಕೊಂಡಿತು ಅದರಲ್ಲಿ 10 ದಶ ಸಂಕಲ್ಪದ ಭರವಸೆಯನ್ನು ನೀಡಿದ್ದಾರೆ ಅಲ್ಲದೆ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಹಲವಾರು ಯೋಜನೆಗಳನ್ನು ಮುಸ್ಲಿಮರಿಗೆ ಕೊಟ್ಟಿದ್ದರು ಅಲ್ಲದೆ ಎಲ್ಲಾ ಜಾತಿ ಧರ್ಮದವರಿಗೂ ಸಮಾನವಾಗಿ ಹಲವಾರು ಯೋಜನೆಗಳನ್ನು ನೀಡಿದ್ದರು.ಆದರೂ ಕಾಂಗ್ರೆಸ್ ವಿರೋಧಿಗಳು ಮುಸ್ಲಿಮರಿಗೆ ಕಾಂಗ್ರೆಸ್ ನಿಂದ ಏನು ಪ್ರಯೋಜನ ಆಗಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ವಿನ್ಸೆಂಟ್ ಡಿಸೋಜ, ಸಲೀಂ ಗೇರ್ ಕಟ್ಟೆ ಲತೀಫ್, ಏಕೆ ಅಹಮದ್ ಹಾಗೂ ಇತರರು ಉಪಸ್ಥಿತರಿದ್ದರು.
