ಜೈಲಿನಲ್ಲಿದ್ದೇ ಎಸ್‍ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಎಸ್.ಡಿ.ಪಿ.ಐ ಮುಖಂಡ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಆರೋಪದಲ್ಲಿ ಯುಎಪಿಎ ಕಾಯ್ದೆಯಡಿ ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟು ಜೈಲಿನಲ್ಲಿರುವ ಶಾಫಿ ಬೆಳ್ಳಾರೆ ತಮ್ಮ ಪಕ್ಷದ ಏಜೆಂಟ್ ಗಳ ಮೂಲಕ ನಾಮಪತ್ರ ಸಲ್ಲಿಸಿದರು. ಪಕ್ಷದ ಕಛೇರಿಯಿಂದ ಮಿನಿ ವಿಧಾನಸೌಧದವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದ ಎಸ್.ಡಿ.ಪಿ.ಐ ಕಾರ್ಯಕರ್ತರು ಶಾಫಿ ಬೆಳ್ಳಾರೆ ಪರ ಘೋಷಣೆಗಳನ್ನು ಕೂಗಿದರು. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26 ರಂದು ಪಿಎಫ್‍ಐ ಸಂಘಟನೆಗೆ ಸೇರಿದ ಮೂವರು ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ನಡೆಸಿದ್ದರು. ಈ ಪ್ರಕರಣವನ್ನು ರಾಜ್ಯ ಸರಕಾರ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದ ಹಿನ್ನಲೆಯಲ್ಲಿ ತನಿಖಾ ದಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಿದ್ದು, ಶಾಫಿ ಬೆಳ್ಳಾರೆ ಕೂಡಾ ಈ ಬಂಧಿತರಲ್ಲಿ ಓರ್ವ ಆರೋಪಿಯಾಗಿದ್ದಾರೆ.