ಮಂಗಳೂರು ತಾಲೂಕಿನ ಮಲ್ಲೂರು ಗ್ರಾಮ ಪಂಚಾಯತ್ ಎರಡನೇ ಬಾರಿಗೆ SDPI ತೆಕ್ಕೆಗೆ

ಮಂಗಳೂರು : ಮಂಗಳೂರು ತಾಲೂಕಿನ ಮಲ್ಲೂರು ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ SDPI ಬೆಂಬಲಿತ ಅಭ್ಯರ್ಥಿಗಳಾದ ಪ್ರೇಮ ಅದ್ಯಕ್ಷರಾಗಿ ಇಲ್ಯಾಸ್ ಪಾದೆ ಉಪಾಧ್ಯಕ್ಷ ರಾಗಿ ಅವಿರೋದವಾಗಿ ಆಯ್ಕೆಯಾಗಿ ಪಂಚಾಯತ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಮೀಸಲಾತಿ ನಿಗದಿಯಾಗಿತ್ತು . ಒಟ್ಟು ಒಂಬತ್ತು ಸದಸ್ಯ ಬಲ ಹೊಂದಿರುವ ಪಂಚಾಯತ್ ನಲ್ಲಿ SDPI 5 ಕಾಂಗ್ರೆಸ್ 3 ಹಾಗೂ ಬಿಜೆಪಿ 1 ಸ್ಥಾನವನ್ನು ಹೊಂದಿದೆ . ಇಂದು ನಡೆದ ಅಧ್ಯಕ್ಷ ,ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ನಾಮಪತ್ರ ಸಲ್ಲಿಸದೇ ಗೈರು ಹಾಜರಾಗಿದ್ದರು, ಕೇವಲ SDPI ಬೆಂಬಲಿತ ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಅಧ್ಯಕ್ಷೆಯಾಗಿ ಪ್ರೇಮ ಸತೀಶ್ ಮತ್ತು ಉಪಾಧ್ಯಕ್ಷ ರಾಗಿ ಇಲ್ಯಾಸ್ ಪಾದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
