ಪೆರ್ನಾಜೆ: ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜ್ ಮತ್ತು ಪ್ರೌಢಶಾಲೆಯಲ್ಲಿ ಪ್ರತಿಭಾ ಲಾಲಿತ್ಯ 2023 -24
ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ಜ.2 ರಂದು “ಪೆರ್ನಾಜೆ ಪ್ರತಿಭಾ ಲಾಲಿತ್ಯ 2023 24 ರ ಪೆರ್ನಾಜೆ ಶ್ರೀ ದಿ. ಸೀತಾರಾಮ್ ಭಟ್ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪರಮಪೂಜ್ಯ ಸಾದ್ವಿ ಶ್ರೀ ಶ್ರೀ ಮಾತಾ ನಂದಮಯೀ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಇವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಈ ಸಂಸ್ಥೆ ಉತ್ತರೋತ್ತರ ಅಭಿವೃದ್ದಿ ಹೊಂದಿ ಮುಂದಿನ ದಿನಗಳಲ್ಲಿ ಈ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕು ಪಸರಿಸಲಿ ಎಂದು ಆಶೀರ್ವದಿಸಿದರು.
ನಿವೃತ್ತ ಉಪನ್ಯಾಸಕಿ ಶ್ರೀಮತಿ ಸುಕನ್ಯಾ ಡಿ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಮತ್ತು ಸಂಸ್ಥೆಯ ಶೈಕ್ಷಣಿಕ ಕಾರ್ಯದರ್ಶಿಯಾದ ಶ್ರೀ ಯು ಶಿವಶಂಕರ ಭಟ್ ವಹಿಸಿದರು.ಶ್ರೀ ಸೀತಾರಾಘವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೆರ್ನಾಜೆ ಶಂಕರನಾರಾಯಣ ಭಟ್ ಕಾರ್ಯಕ್ರಮದ ಸರ್ವಾಧ್ಯಕ್ಷತೆಯನ್ನು ವಹಿಸಿದರು.
ನನ್ಯ ಅಚ್ಯುತ ಮೂಡೆತ್ತಾಯ ಅಧ್ಯಕ್ಷರು, ಶ್ರೀ ಗಜಾನನ ವಿದ್ಯಾಸಂಸ್ಥೆಗಳು, ಹನುಮಗಿರಿ ಈಶ್ವರಮಂಗಲ , ಹೇಮನಾಥ ಶೆಟ್ಟಿ ಕಾವು ಸಂಚಾಲಕರು ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು, ನೂಜಾಲ ಸುಬ್ರಮಣ್ಯ ಭಟ್ ನಂದ ಗೋಕುಲ, ಸಂಸ್ಥೆಯ ಸಂಚಾಲಕಿಯಾದ ಶ್ರೀಮತಿ ಅನುಪಮಾ ಭಟ್ ಉಪಸ್ಥಿತರಿದ್ದರು.
ಆಡಳಿತ ಕಾರ್ಯದರ್ಶಿಯಾದ ಶ್ರೀ ಕೊಚ್ಚಿ ಕೃಷ್ಣ ಪ್ರಸಾದ್ ಪ್ರಾಸ್ತವಿಕವಾಗಿ ಮಾತನಾಡಿದರು.ನಿವೃತ್ತ ಶಿಕ್ಷಕರಾದ ಶ್ರೀ ಎಸ್ ನಾರಾಯಣ ಭಟ್ ಸಂಸ್ಥಾಪಕರ ಕುರಿತು ಸoಸ್ಮರಣೆ ಮಾಡಿದರು. ನಿವೃತ್ತ ಶಿಕ್ಷಕರಾದ ಪಟ್ಟಾಜೆ ಸುಬ್ರಹ್ಮಣ್ಯ ಭಟ್ ನಿವೃತ್ತ ಉಪನ್ಯಾಸಕಿ ಕುರಿತು ಮಾತನಾಡಿದರು, ಆಡಳಿತ ಮಂಡಳಿಯ ನಿರ್ದೇಶಕ ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಶ್ರೀಮತಿ ಸರೋಜಿನಿ ಅವರು ನಿವೃತ್ತ ಉಪನ್ಯಾಸಕರಿಗೆ ನೀಡಲಾದ ಅಭಿನಂದನಾ ಪತ್ರವನ್ನು ವಾಚನ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಮಂಟ್ಯಯ್ಯ ಎಲ್ಲರನ್ನು ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರು ಶ್ರೀಮತಿ ಸುಜಾತ ಸಂಸ್ಥೆಯ ವರದಿಯನ್ನು ಮಂಡಿಸಿದರು .ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ಪಿ ವಂದನಾರ್ಪಣೆ ಮಾಡಿದರು. ಮತ್ತು ಆಡಳಿತ ಮಂಡಳಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು ,ನೌಕರ ವೃಂದ, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು, ಹೆತ್ತವರು ಹಾಗೂ ಪೋಷಕರು ದಾನಿಗಳು ಹಾಗೂ ಗೌರವ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಿವೃತ್ತ ಪ್ರಾಂಶುಪಾಲರಾದ ಶಾಮಣ್ಣ ಕೆ ಅಪರಾಹ್ನದ ಮನೋರಂಜನ ಕಾರ್ಯಕ್ರಮವನ್ನು ಬ್ಯಾಂಡ್ ಬಾರಿಸುವುದರ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕಿ ಸುಕನ್ಯಾ ಡಿ ನಿರೂಪಣೆ ಮಾಡಿದರು.