ಶಕುಂತಳಾ ಶೆಟ್ಟಿ ಅವರಿಗೆ ಟಿಕೆಟ್ ನೀಡದಿದ್ದಲ್ಲಿ ಸಾಮೂಹಿಕ ರಾಜೀನಾಮೆ : ಪುತ್ತೂರು ಮಹಿಳಾ ಕಾಂಗ್ರೆಸ್
ಈ ಬಾರಿಯ ಚುನಾವಣೆಯಲ್ಲಿ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ಮುಖಂಡೆ ಶಕುಂತಳಾ ಶೆಟ್ಟಿಯವರಿಗೆ ಟಿಕೆಟ್ ನೀಡದಿದ್ದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್ ನ ಎಲ್ಲ ಪದಾಧಿಕಾರಿಗಳು ಸಾಮೊಹಿಕ ರಾಜೀನಾಮೆ ನೀಡುವುದಾಗಿಯೂ ಹಾಗು ಶಕುಂತಳಾ ಶೆಟ್ಟಿಯವರು ಪಕ್ಷೇತರರರಾಗಿ ಸ್ಪರ್ಧಿಸಲು ಅಗ್ರಹಿಸುವುದಾಗಿಯೂ ಮಹಿಳಾ ಕಾಂಗ್ರೆಸ್ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅದ್ಯಕ್ಷೆ ಶಾರದ್ ಅರಸ್, ಮತ್ತು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ವಿಶಾಲಕ್ಷಿ ಬನ್ನೂರು ತಿಳಿಸಿದ್ದಾರೆ.
ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು “ ಶಕುಂತಳಾ ಶೆಟ್ಟಿಯವರು ತಮ್ಮ ಶಾಸಕತ್ವದ ಅವಧಿಯಲ್ಲಿ ಮಹಿಳೆಯರ ಏಳಿಗೆಗಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಮಹಿಳೆಯರ ರಕ್ಷಣೆಗೆ ಮಹಿಳಾ ಪೆÇೀಲಿಸ್ ಠಾಣೆಯನ್ನು ಪುತ್ತೂರಿನಲ್ಲಿ ಆರಂಭಿಸಿದರು. ಮಹಿಳೆಯರು ಆರ್ಥಿಕವಾಗಿ ಬೆಳೆಯಲು ಸ್ತ್ರೀ ಶಕ್ತಿ ಸಂಘಟನೆಗಳನ್ನು ಬಲಪಡಿಸಲು ಸ್ತ್ರೀ ಶಕ್ತಿ ಭವನದ ಸ್ಥಾಪನೆ ಮಾಡಿದ್ದಾರೆ. ಮಹಿಳೆಯರ ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡುವ ಮೂಲಕ ಮಹಿಳೆಯರಿಗೆ ಭರವಸೆಯ ಆಶಾಕಿರಣವಾಗಿದ್ದಾರೆ ಎಂದರು.
ಬಿಜೆಪಿಯು ದಕ್ಷಿಣ ಕನ್ನಡದಲ್ಲಿ ಮಹಿಳೆಯರಿಗೆ ಪುತ್ತೂರು ಮತ್ತು ಸುಳ್ಯದಲ್ಲಿ ಅವಕಾಶ ನೀಡಿದೆ.ಆದರೆ ಕಾಂಗ್ರೆಸ್ ಪಕ್ಷ ಮಹಿಳೆಯನ್ನುಕಡೆಗಣಿಸುವ ಮೂಲಕ ದಕ್ಷಿಣ ಕನ್ನಡದಲ್ಲಿ ಅತೀ ಹೆಚ್ಚು ಇರುವ ಮಹಿಳಾ ಮತದಾರರನ್ನು ಅವಮಾನಿಸುವ ಕೆಲಸದಲ್ಲಿ ತೊಡಗಿದೆ ಎಂದು ಅನಿಸುತ್ತಿದೆ.ಕಾಂಗ್ರೆಸ್ ಹೈಕಮಾಂಡ್ ಈ ವಿಷಯದ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು.ಇಲ್ಲವಾದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ರವಾನಿಸಿದ್ದಾರೆ
ಸುದ್ದಿಗಪೊಷ್ಟಿಯಲ್ಲಿ ಕಾಂಗ್ರೆಸ್ ಮುಖಂಡೆಯರಾದ ವಿಲ್ಮಾ ಗೋನ್ಸಾಲ್ವಿಸ್, ಸುಧಾ ಕುಂಜತ್ತಾಯ, ಸೀತಾಭಟ್ ಉಪಸ್ಥಿತರಿದ್ದರು.