ಶಕುಂತಳಾ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ : ಪಕ್ಷದ ವರಿಷ್ಠರಿಗೆ ಮಹಿಳಾ ಕಾಂಗ್ರೆಸ್ ಸಮಿತಿ ಆಗ್ರಹ

ಪುತ್ತೂರು ಕಾಂಗ್ರೇಸ್ ನಲ್ಲಿ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಗೆ ಆದ್ಯತೆ ನೀಡಬೇಕು. ಅದರಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕು ಎಂದು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ.

ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾರದಾ ಅರಸ್ ಅವರು ಮಂಗಳವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪುತ್ತೂರಿನಲ್ಲಿ 2 ಬಾರಿ ಶಾಸಕಿಯಾಗಿದ್ದ ಶಕುಂತಳಾ ಶೆಟ್ಟಿ ಅವರು ಓರ್ವ ಅನುಭವಿ ರಾಜಕಾರಣಿಯಾಗಿದ್ದಾರೆ. ಅಲ್ಲದೆ ಜನರ ನೋವು ಸಂಕಷ್ಟಗಳನ್ನು ಅತೀ ಹತ್ತಿರದಿಂದ ಬಲ್ಲವರಾಗಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಈ ಹಿಂದೆ ಸಾವಿರಾರು ಕೋಟಿ ಅನುದಾನ ತಂದು ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿ ಪಡಿಸಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಅವರ ದೊಡ್ಡ ಕನಸಾಗಿತ್ತು. ಅದಕ್ಕಾಗಿ ಜಾಗವೂ ಮಂಜೂರುಗೊಳಿಸಿದ್ದಾರೆ. ಇದೀಗ ಮೆಡಿಕಲ್ ಕಾಲೇಜು ನಿರ್ಮಾಣ ಕನಸು ಅರ್ಧಕ್ಕೆ ನಿಂತಿದೆ. ಅದರೊಂದಿಗೆ ಇನ್ನಿತರ ಉಪಯೋಗಿ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ನಡೆಸಲು ಅವರಿಗೆ ಮತ್ತೊಮ್ಮೆ ಅವಕಾಶ ನೀಡುವುದು ಉತ್ತಮವಾಗಿದೆ. ಇದು ಪಕ್ಷದ ವರಿಷ್ಠರಿಗೆ ನಮ್ಮ ಬೇಡಿಕೆಯಾಗಿದ್ದು, ಹೈಕಮಾಂಡ್ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಿದರೂ ನಾವು ಪಕ್ಷಕ್ಕಾಗಿ ಕೆಲಸ ಮಾಡುತ್ತೇವೆ ಎಂದರು.

ಪಕ್ಷದ ಸಂಘಟನೆಗಾಗಿಯೂ ಸಾಕಷ್ಟು ಕೆಲಸ ಮಾಡಿರುವ ಶಕುಂತಳಾ ಶೆಟ್ಟಿ ಅವರು ಕಾರ್ಯಕರ್ತರ ವಿಶ್ವಾಸ ಗಳಿಸಿದ್ದಾರೆ. ಈ ಹಿಂದೆ ಪಕ್ಷದ ಸಂಸದೀಯ ಕಾರ್ಯದರ್ಶಿಯಾಗಿಯೂ ಅವರು ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯರ ಒಲವು ಶಕುಂತಳಾ ಶೆಟ್ಟಿ ಅವರ ಪರವಾಗಿದೆ. ಮಹಿಳೆಯರಿಗೆ ಶಕ್ತಿ ನೀಡುವ ನಿಟ್ಟಿನಲ್ಲಿ ಪಕ್ಷವು ಅವರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಸಾಯಿರ ಜುಬೇರ್, ಬ್ಲಾಕ್ ಉಪಾಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಬ್ಲಾಕ್ ಕೋಶಾಧಿಕಾರಿ ಶುಭಮಾಲಿನಿ ಮಲ್ಲಿ, ಮಹಿಳಾ ಕಾಂಗ್ರೆಸ್ ಸದಸ್ಯೆ ವಿಲ್ಮಾ ಗೊನ್ಸಾಲಿಸ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.