ಶರಣ್ ಪಂಪ್‌ವೆಲ್ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ: ಗುಲಾಂ ಮುಹಮ್ಮದ್

ಪಡುಬಿದ್ರಿ: ಫಾಝಿಲ್ ಹತ್ಯೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಕೂಡಲೇ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್ ಮುಖಂಡ ಗುಲಾಂ ಮುಹಮ್ಮದ್ ಹೆಜಮಾಡಿ ಒತ್ತಾಯಿಸಿದ್ದಾರೆ. ತುಮಕೂರು ಹಾಗೂ ಉಳ್ಳಾಲದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಇಲಾಖೆಗೆ ಶರಣ್ ಪಂಪ್‌ವೆಲ್ ಸಾವಾಲೆಸಿದ್ದಿದ್ದಾನೆ. ಇಲಾಖೆ ಇಂತಹವರ ವಿರುದ್ಧ ಯಾವುದೇ ರೀತಿಯಲ್ಲಿ ಸರ್ಕಾರದ ಒತ್ತಡಕ್ಕೆ ಮಣಿಯದೆ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಫಾಝಿಲ್ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸಬೇಕು. ಜಿಲ್ಲೆಯಲ್ಲಿ ಇದುವರೆಗೆ ಆದ ಎಲ್ಲಾ ಕೋಮುಗಲಭೆಗಳ ಪ್ರಕರಣದ ಬಗ್ಗೆ ಶರಣ್ ಪಂಪ್‌ವೆಲ್ ಪಾತ್ರದ ಬಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.