ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಸಂಭ್ರಮ

ಬೈಂದೂರು:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಪ್ಪುಂದದಲ್ಲಿ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ ಅಕ್ಟೋಬರ್ 03 ರಿಂದ ಆರಂಭಗೊಂಡು ಅಕ್ಟೋಬರ್ 12 ರ ತನಕ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.

ಗ್ರಾಮ ದೇವತೆಯಾದ ಶ್ರೀ ಉಪ್ಪುಂದ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪ್ರತಿ ದಿನ ಬೆಳಿಗ್ಗೆ ದೇವಸ್ಥಾನದ ವತಿಯಿಂದ ದುರ್ಗಾಹೋಮ ಹಾಗೂ ಭಕ್ತರು ಸೇವಾ ರೂಪದಲ್ಲಿ ಶ್ರೀ ದೇವಿಗೆ ಸಮರ್ಪಿಸಲಿರುವ ದುರ್ಗಾ ಹೋಮ ಮತ್ತು ಅನ್ನಸಂತರ್ಪಣೆ ಸೇವಾ ಕಾರ್ಯಭಜನಾ ಸಂಕೀರ್ತನೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪುರೋಹಿತರ ನೇತೃತ್ವದಲ್ಲಿ ಜರುಗಲಿದೆ.

ಅಕ್ಟೋಬರ್ 12 ರಂದು ಅಮ್ಮನವರ ಸನ್ನಿಧಾನದಲ್ಲಿ ಬೆಳಿಗ್ಗೆ 6 ಗಂಟೆಗೆ ಕದಿರು ಹಬ್ಬ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಯು ಸತೀಶ ಶೆಟ್ಟಿ ಮಾತನಾಡಿ,ದೇವಸ್ಥಾನವನ್ನು ಸರ್ವತೋಮುಖವಾಗಿ ಅಭಿವೃದ್ಧಿಗೊಳಿಸುವ ದೃಷ್ಟಿಯಿಂದ ಮುಂದಿನಗಳಲ್ಲಿ ದೇವಸ್ಥಾನದ ಗರ್ಭಗುಡಿ ಸಹಿತ, ದೇವಸ್ಥಾವನ್ನು ಸಂಪೂರ್ಣವಾಗಿ ಜೀರ್ಣೋದ್ಧಾರಗೊಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ: ಹಮ್ಮಿಕೊಳ್ಳಲಾಗಿದೆ.ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಾಭಿವೃದ್ಧಿಗೆ ಧನಸಹಾಯ ನೀಡಬೇಕೆಂದು ಕೇಳಿಕೊಂಡರು.


ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಕಾಶ್ ಉಡುಪ ಅವರು ಮಾತನಾಡಿ, ನವರಾತ್ರಿ ಸಂದರ್ಭದಲ್ಲಿ ತಾಯಿಯನ್ನು ಆರಾಧನೆ ಮಾಡುವುದರಿಂದ ತಮ್ಮ ಇಷ್ಟಾರ್ಥಗಳನ್ನು ಸಿದ್ಧಿಸಿಕೊಳ್ಳಬಹುದು.ತಾಯಿ ಆರಾಧನೆ ಮಾಡುವುದು ಜಗತ್ತಿನಲ್ಲಿ ಬಹಳ ಮುಖ್ಯವಾಗಿದೆ‌.ತಾಯಿ ಆರಾಧನೆ ಮಾಡುವುದರಿಂದ ಮೋಹ ಪಾಷದಿಂದ ಬಿಡುಗಡೆಯನ್ನು ಸಹ ಹೊಂದಬಹುದಾಗಿದೆ ಎಂದು ಹೇಳಿದರು.ಜಗನ್ಮಾತೆ ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅರ್ಚಕರಾದ ಸಂದೇಶ್ ಭಟ್ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಕ್ತಾದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Add - Clair veda ayur clinic

Related Posts

Leave a Reply

Your email address will not be published.