ಶಿರಾಡಿ ಘಾಟ್ ಸುರಂಗ ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ
ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್ ಕುಮಾರ್ ಕಟೀಲ್ ಟ್ವಿಟ್ ಮಾಡಿದ್ದು ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ-ಅಡ್ಡಹೊಳೆ(ಶಿರಾಡಿ ಘಾಟ್) ಭಾಗದ ಚತುಷ್ಪತ ರಸ್ತೆ ಕಾಮಗಾರಿಗೆ 1976 ಕೋಟಿ ರೂ.ಮೊತ್ತದ ಬಿಡ್ ಆಹ್ವಾನಿಸಿದೆ. ಶಿರಾಡಿ ಘಾಟ್‌ನಲ್ಲಿ 15,000 ಕೋಟಿ ಮೊತ್ತದ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಆದೇಶಿಸಿದೆ ಅಂತ ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ಹೆದ್ದಾರಿ ಭಾಗವಾದ ಸಕಲೇಶಪುರದಿಂದ ಮಾರನಹಳ್ಳಿವರೆಗಿನ ರಸ್ತೆ ಭಾಗದ ದುರಸ್ತಿಗೂ ನಿತಿನ್ ಗಡ್ಕರಿ ಅವರು ಆದೇಶಿಸಿದ್ದಾರೆ. ಈ ಎಲ್ಲ ಕಾಮಗಾರಿಗಳಿಂದ ಬೆಂಗಳೂರು-ಮಂಗಳೂರು ರಸ್ತೆ ಸಂಚಾರ ಆರಾಮದಾಯಕವಾಗಲಿದೆ ಎಂದು ತಿಳಿಸಿದ್ದಾರೆ