ಶಿರೂರು: ದೋಣಿ ದುರಂತ, ಇಬ್ಬರು ಮೀನುಗಾರರು ದುರ್ಮರಣ

ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.

ಭಾನುವಾರ ರಾತ್ರಿ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ದೋಣಿಯಲ್ಲಿ ೩ ಜನ ಮೀನುಗಾರರಿದ್ದರು. ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ ಹಡವಿನಕೋಣೆ, ಶಿರೂರು ಮಿಸ್ಬಾ ಯೂಸುಫ್ ಮೃತಪಟ್ಟಿದ್ದಾರೆ. ದೋಣಿಯಲ್ಲಿದ್ದ ಮತ್ತೋರ್ವ ಬುಡ್ಡು ಮುಖ್ತಾರ್ ( 37 ) ಹಡವಿನಕೋಣೆ ಅವರನ್ನು ಮತ್ತೊಂದು ದೋಣಿಯಲ್ಲಿದ್ದ ಮಾಮ್ಸು ಯಾಕೂಬ್ ರವರು ರಕ್ಷಣೆ ಮಾಡಿದ್ದಾರೆ. ಈ ಭಾಗದಲ್ಲಿ ಕೆಲವೆ ತಿಂಗಳುಗಳ ಹಿಂದೆ ಇಬ್ಬರು ಮೀನುಗಾರರ ಸಮುದ್ರ ಪಾಲಾಗಿದ್ದು, ಈ ವರ್ಷ ಬೈಂದೂರು ಭಾಗದಲ್ಲಿ ಅತ್ಯಧಿಕ ಮೀನುಗಾರಿಕಾ ದುರಂತಗಳು ನಡೆದಿದೆ. ಕರಾವಳಿ ಕಾವಲು ಪಡೆ ಹಾಗೂ ಪೊಲೀಸ್ ಸಿಬ್ಬಂದಿಗಳು ಆಗಮಿಸಿದ್ದು ಪರಿಶೀಲನೆ ನಡೆಸಿದರು. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published.