ಕರೆಂಟ್ ಶಾಕ್ ಹೊಡೆದು ಯುವಕ ಸಾವು

ಅಡಿಕೆ ತೆಗೆಯುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿದ ಘಟನೆ ಉಡುಪಿಯ ಕಾಪು ತಾಲೂಕಿನ ಕುರ್ಕಾಲು ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಪವನ್ ಶ್ರವಣ್ ಸೇವಂತ್ ಮೃತ ದುರ್ದೈವಿ. ಈತ ಕಬ್ಬಿಣದ ರಾಡ್ ಗೆ ಕತ್ತಿ ಕಟ್ಟಿ ಅಡಿಕೆ ತೆಗೆಯಲು ಮುಂದಾಗಿದ್ದ ವೇಳೆ ವಿದ್ಯುತ್ ತಂತಿಗೆ ರಾಡ್ ತಗಲಿ ಯುವಕ ಮೃತಪಟ್ಟಿದ್ದಾನೆ. ಶಿರ್ವಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
