ಶಿರ್ವ: ಸಿಡಿಲಾಘತಕ್ಕೆ ಯುವಕ ಬಲಿ

ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಸಿಡಿಲಾಘತಕ್ಕೆ ಕಾಲೇಜು ವಿದ್ಯಾರ್ಥಿ ಬಲಿಯಾದ ಘಟನೆ ಕಳೆದ ರಾತ್ರಿ ನಡೆದಿದೆ
ಶಿರ್ವ ಎಂ ಎಸ್ ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ ರಕ್ಷಿತ್ ಪೂಜಾರಿ (20 )ಮೃತಪಟ್ಟವರು.
ಕಳೆದ ರಾತ್ರಿ ಸ್ನಾನ ಮಾಡಲು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ ಎನ್ನಲಾಗಿದೆ. ನೆಲಕ್ಕೆ ಬಿದ್ದಿದ್ದ ಅವರನ್ನು ಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ.
