ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 4ನೇ ದಿನದ ಅತಿರುದ್ರ ಮಹಾಯಾಗ ಪ್ರಾರಂಭ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ನಾಲ್ಕನೇ ದಿನ ಫೆಬ್ರವರಿ 25, 2023 ರ ಶನಿವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು.
ಅಷ್ಟೋತ್ತರಸಹಸ್ರ ನಾಳಿಕೇರ ಗಣಯಾಗ ಆರಂಭಗೊಂಡಿದ್ದು, ಗಣಯಾಗದ ಪೂರ್ಣಾಹುತಿ, ಬ್ರಹ್ಮಚಾರಿ ಆರಾಧನೆ, ಕನ್ನಿಕಾ ಆರಾಧನೆ, ದಂಪತಿ ಪೂಜೆ, ಆಚಾರ್ಯ ಪೂಜೆ, ಶ್ರೀ ದೇವರಿಗೆ ಮಹಾಪೂಜೆ, ಮಹಾಸಂತರ್ಪಣೆ ನೆರವೇರಲಿದೆ. ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಶಾಸಕ ಕೆ. ರಘುಪತಿ ಭಟ್ ಮತ್ತು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ ಮಹೇಶ್ ಠಾಕೂರ್ ಉಪಸ್ಥಿತರಿದ್ದರು. ಬೆಳಗ್ಗೆಯಿಂದ ಸಹಸ್ರಾರು ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ, ಅತಿರುದ್ರ ಮಹಾಯಾಗದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗ ಮಾರ್ಚ್ 05, 2023 ರವರೆಗೆ ನಡೆಯಲಿದೆ. 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ ನಿರಂತರವಾಗಿ ಯಾಗ ನಡೆಯಲಿವೆ.