ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 4ನೇ ದಿನದ ಅತಿರುದ್ರ ಮಹಾಯಾಗ ಧಾರ್ಮಿಕ ಕಾರ್ಯಗಳು

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ನಾಲ್ಕನೇ ದಿನ ಫೆಬ್ರವರಿ 25, 2023 ರ ಶುಕ್ರವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಗಣಯಾಗಮಂಟಪದಲ್ಲಿ ಅಷ್ಟೋತ್ತರಸಹಸ್ರ ನಾಳಿಕೇರ ಗಣಯಾಗ, ಗಣಯಾಗದ ಪೂರ್ಣಾಹುತಿ, ಬ್ರಹ್ಮಚಾರಿ ಆರಾಧನೆ, ಕನ್ನಿಕಾ ಆರಾಧನೆ, ದಂಪತಿ ಪೂಜೆ, ಆಚಾರ್ಯ ಪೂಜೆ, ಶ್ರೀ ದೇವರಿಗೆ ಮಹಾಪೂಜೆ, ಮಹಾಸಂತರ್ಪಣೆ ನೆರವೇರಿತು.

ಮಧ್ಯಾಹ್ನ ಸ್ಥಳೀಯ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಸಹಸ್ರಾರು ಭಕ್ತಾದಿಗಳು ಅತಿರುದ್ರ ಮಹಾಯಾಗದಲ್ಲಿ ಪಾಲ್ಗೊಂಡು ಅನ್ನಸಂತರ್ಪಣೆಯನ್ನು ಸ್ವೀಕರಿಸಿದರು. ಮಣಿಪಾಲದ ಮಾಹೆ ವಿದ್ಯಾರ್ಥಿಗಳು ಜನರಿಗೆ ಆಹಾರವನ್ನು ಬಡಿಸಿ, ದೇವಾಲಯದ ಸೇವಾ ಕರ್ತವ್ಯದಲ್ಲಿ ಭಾಗವಹಿಸಿ, ಸ್ವಯಂ ಸೇವಕರಾಗಿ ಜನರಿಗೆ ಮಾರ್ಗದರ್ಶನ ನೀಡಿದ್ದಾರೆ. ಸಂಜೆ ಕೂಡ ಧಾರ್ಮಿಕ ಕಾರ್ಯಗಳು ನೆರವೇರಲಿದ್ದು, ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.

ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗ ಮಾರ್ಚ್ 05, 2023 ರವರೆಗೆ ನಡೆಯಲಿದೆ. 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ ನಿರಂತರವಾಗಿ ಯಾಗ ನಡೆಯಲಿವೆ.

Related Posts

Leave a Reply

Your email address will not be published.