ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 6ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಐದು ದಿನಗಳನ್ನು ಪೂರೈಸಿದೆ.

ಅತಿರುದ್ರ ಮಹಾಯಾಗದ ಆರನೇ ದಿನವಾದ ಫೆಬ್ರವರಿ 27, 2023 ರ ಸೋಮವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ 07:30 ರಿಂದ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಸಾಯಂಕಾಲ 6 ರಿಂದ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ ಸೇವೆ ನಡೆಯಲಿವೆ. ದೇವಸ್ಥಾನದ ಪ್ರಾಂಗಣದಲ್ಲಿ ಬೆಳಗ್ಗೆ 08:30 ರಿಂದ ಋತ್ವಿಜರಿಂದ ಸಪ್ತಶತೀ ಪಾರಾಯಣ, ಮಹಾಮೃತ್ಯುಂಜಯ ಹೋಮ ನೆರವೇರಲಿವೆ.

ಸಂಜೆ 5 ರಿಂದ 6ನೇ ದಿನ ಅತಿರುದ್ರ ಮಹಾಯಾಗದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ನಂತರ ಮಂಗಳೂರಿನ ಅಖಿಲ ಭಾರತೀಯ ಜ್ಞಾನ ಭಾರತಿ ಪ್ರಕಾಶನ ನಿಯಮಿತ ಅಧ್ಯಕ್ಷರಾದ ಶ್ರೀ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಂದ ಧಾರ್ಮಿಕ ಉಪನ್ಯಾಸ, ಸಂಜೆ 7 ರಿಂದ ವಿದುಷಿ ಪವನಾ ಬಿ. ಆಚಾರ್ಯ ಮತ್ತು ವಿದ್ಯಾರ್ಥಿಗಳಿಂದ “ಏಕಾದಶ ವೀಣಾ ವಾದನ” ಮತ್ತು ರಾತ್ರಿ 08:30 ರಿಂದ ಸಾಲಿಗ್ರಾಮ ಮೇಳದಿಂದ “ಭೀಷ್ಮ ವಿಜಯ” ಯಕ್ಷಗಾನ ಬಯಲಾಟ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.