ಆನ್ ಡ್ಯೂಟಿನಲ್ಲಿ ಶಿವನ ಧ್ಯಾನ : ಶಿವಪಾಡಿಯ ಅತಿರುದ್ರ ಮಹಾಯಾಗಕ್ಕೆ ಪೊಲೀಸರ ಆಗಮನ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಎಂಟನೇ ದಿನವಾದ ಮಾರ್ಚ್ 01, 2023 ರ ಬುಧವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀ ಪುರುಷಸೂಕ್ತ ಹೋಮ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಣಿಪಾಲದ ಇನ್ಸ್ಪೆಕ್ಟರ್ ದೇವರಾಜ್ ಟಿ ವಿ, ಎ ಎಸ್ ಐ ಉಮೇಶ್ ಜೋಗಿ, ಹೆಡ್ ಕಾನ್ಸ್ಟೇಬಲ್ ಉಮೇಶ್, ಕಾನ್ಸ್ಟೇಬಲ್ ದೇವರಾಜ್ ಅವರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿ, ಯಾಗದ ಆಹುತಿಗೆ ಅರ್ಪಿಸುವ ದ್ರವ್ಯವನ್ನು ಸಮರ್ಪಿಸಿದರು.

ನಂತರ ಉಮಾಮಹೇಶ್ವರ ದೇವರ ದರ್ಶನ ಪಡೆದರು. ಇಂದು ಸಾಕಷ್ಟು ಸಂಖ್ಯೆಯಲ್ಲಿ ಭಗವದ್ ಭಕ್ತರು ಅತಿರುದ್ರ ಮಹಾಯಾಗದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸಂಜೆ ಶತಚಂಡಿಕಾ ಯಾಗಮಂಟಪದಲ್ಲಿ ವಾಸ್ತು ಹೋಮ, ರಾಕ್ಷೋಘ್ನ ಹೋಮ, ಪ್ರಾಸಾದ ಶುದ್ಧಿ, ಕುಂಡ ಸಂಸ್ಕಾರ ಹೋಮ ಮತ್ತು ಅತಿರುದ್ರ ಯಾಗಮಂಟಪದಲ್ಲಿ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ ಸೇವೆ ನೆರವೇರಲಿವೆ.