ಸಂಕಲ್ಪ ಸಾಧನೆ : ಯಶಸ್ವಿಯಾಗಿ ಸಮಾಪ್ತಿಗೊಂಡ ಶಿವಪಾಡಿಯ ಅತಿರುದ್ರ ಮಹಾಯಾಗ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಸಮಾಪ್ತಿಯ ದಿನ ಮಾರ್ಚ್ 05, 2023 ರ ಭಾನುವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಜಗದ್ಗುರುಗಳ ಸಾನಿಧ್ಯದಲ್ಲಿ ಪೂರ್ಣಾಹುತಿ, ಮಧ್ಯಾಹ್ನ ಜಗದ್ಗುರುಗಳಿಂದ ಶ್ರೀ ದೇವರಿಗೆ ಕಲಶಾಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ, ಫಲಮಂತ್ರಾಕ್ಷತೆ. ನಂತರ ಪಲ್ಲಪೂಜೆ, ಮಹಾಸಂತರ್ಪಣೆ ನೆರವೇರಿತು. ಅತಿರುದ್ರ ಮಹಾಯಾಗದ ಮಹಾಸಂಕಲ್ಪ ಸುದೀರ್ಘ 12 ದಿನಗಳ ಕಾಲ ನಡೆದು ಅತ್ಯಂತ ಯಶಸ್ವಿಯಾಗಿ ಇಂದು ಸಮಾಪ್ತಿಗೊಂಡಿತು.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ. ಸುನೀಲ್ ಕುಮಾರ್, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಬೈಂದೂರು ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ, ನಟ ರಕ್ಷಿತ್ ಶೆಟ್ಟಿ, ಮಾಹೆ ವಿ. ವಿ. ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್, ಕುಲಪತಿ ಲೆಫ್ಟಿನೆಂಟ್ ಜನರಲ್ ಡಾ. ಎಂ ಡಿ ವೆಂಕಟೇಶ್ ಮತ್ತು ಶೃಂಗೇರಿ ಮಠದ ಉಡುಪಿ ಧರ್ಮಾಧಿಕಾರಿ ವಾಗೀಶ ಶಾಸ್ತ್ರಿಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಂಡು ಧನ್ಯರಾದರು. ಇದರೊಂದಿಗೆ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಶಾಸಕ ಕೆ. ರಘುಪತಿ ಭಟ್, ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ ಮಹೇಶ್ ಠಾಕೂರ್, ಅತಿರುದ್ರ ಮಹಾಯಾಗದ ಸರ್ವ ಸದಸ್ಯರು, ದೇವಸ್ಥಾನದ ಟ್ರಸ್ಟಿಗಳು ಭಾಗಿಯಾಗಿದ್ದು, ಊರ ಪರವೂರ ಸಹಸ್ರಾರು ಭಕ್ತಾಭಿಮಾನಿಗಳು ಅತಿರುದ್ರ ಮಹಾಯಾಗದ ಪೂರ್ಣಾಹುತಿಗೆ ಆಗಮಿಸಿ ಶ್ರೀ ರುದ್ರನ ಅನುಗ್ರಹ ಪಡೆದರು.